ಬಳ್ಳಾರಿ: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆಯನ್ನಾಗಿ ಮಾಡಲಾಗಿದ್ದು, ಈಗ ಮತ್ತೆ ಬಳ್ಳಾರಿ ಜಿಲ್ಲೆಯೊಂದಿಗೆ ವಿಜಯನಗರವನ್ನು ವಿಲೀನ ಮಾಡಲು ತಾವು ಸಿದ್ಧ ಎಂದು ಕ್ರೀಡಾ ಮತ್ತು ಯುವಜನ ಇಲಾಖೆ ಸಚಿವ ನಾಗೇಂದ್ರ ತಿಳಿಸಿದ್ದಾರೆ.
ಎಲ್ಲಾ ಜನಪ್ರತಿನಿಧಿಗಳು ಒಪ್ಪಿದರೆ ವಿಜಯನಗರ ಜಿಲ್ಲೆಯನ್ನು ಮತ್ತೆ ಬಳ್ಳಾರಿಗೆ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ತೀರ್ಮಾನ ಕೈಗೊಳ್ಳಲು ಸಿದ್ಧ. ಅಖಂಡ ಬಳ್ಳಾರಿ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರ ಫೆ.8ರಂದು ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರವನ್ನು ಬೇರ್ಪಡಿಸಿ ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಗಿತ್ತು. ಅ.2ರಿಂದ ವಿಜಯನಗರ ರಾಜ್ಯದ 31ನೇ ಜಿಲ್ಲೆಯಾಗಿ ಕಾರ್ಯಾರಂಭ ಮಾಡಿತ್ತು. ಆದರೆ ಈಗ ಸಚಿವ ನಾಗೇಂದ್ರ ಬಳ್ಳಾರಿ ವಿಭಜನೆ ಮಾಡಿರುವುದನ್ನು ಅಕ್ಷೇಪಿಸಿದ್ದು, ಮತ್ತೆ ಅಖಂಡ ಬಳ್ಳಾರಿ ಮಾಡುವ ಬಗ್ಗೆ ಚಿಂತನೆ ನಡೆಸಿದ್ದಾರೆ.