ಬೆಂಗಳೂರು: ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಮಾರ್ಗಸೂಚಿ ಪ್ರಕಟಿಸಿದೆ. ಕುಟುಂಬದ ಯಜಮಾನಿ ಎಂದು ಬಿಪಿಎಲ್, ಎಪಿಎಲ್ ಕಾರ್ಡ್ ನಲ್ಲಿ ನಮೂದಾಗಿರುವುದು ಕಡ್ಡಾಯವಾಗಿದೆ.
ಯಜಮಾನಿ ಎಂದು ನಮೂದಿಸಿರುವ ಮಹಿಳೆ ಅರ್ಹ ಫಲಾನುಭವಿ ಆಗಿರುತ್ತಾರೆ. ಕಾಡ್ಡ್ ನಲ್ಲಿ ನಮೂದಾಗಿರುವ ಯಜಮಾನಿಗೆ ಮಾತ್ರ 2000 ರೂ. ನೀಡಲಾಗುವುದು. ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದರೆ ಒಬ್ಬರಿಗೆ ಮಾತ್ರ ಹಣ ನೀಡಲಾಗುವುದು.
ಯಜಮಾನಿ, ಪತಿ ಆದಾಯ ತೆರಿಗೆ ಪಾವತಿದಾರರು, ಯಜಮಾನಿ ಅಥವಾ ಯಜಮಾನ ಜಿಎಸ್‌ಟಿ ಪಾವತಿದಾರರಾಗಿದ್ದರೆ ಯೋಜನೆ ಅನ್ನುವಯವಾಗುವುದಿಲ್ಲ.
ಜೂನ್ 15ರಿಂದ ಜುಲೈ 15ರವರೆಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸ್ವೀಕರಿಸಲಾಗುತ್ತದೆ. ಭೌತಿಕವಾಗಿಯೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಯೋಜನೆ ಲಾಭ ಪಡೆಯಲು ಬ್ಯಾಂಕ್ ಖಾತೆ, ಆಧಾರ್ ಜೋಡಣೆ ಕಡ್ಡಾಯವಾಗಿರುತ್ತದೆ.
ತಪ್ಪು ಮಾಹಿತಿ ನೀಡಿದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ನೀಡಿರುವ ಹಣ ವಸೂಲಿ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ.
ಸುಳ್ಳು ಮಾಹಿತಿ ನೀಡಿ ಯೋಜನೆಯ ಪ್ರಯೋಜನ ಪಡೆದರೆ ಮಾಸಾಶನದ ಮೊತ್ತವನ್ನು ವಸೂಲಿ ಮಾಡಲಾಗುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೌಕರರು, ಅಧಿಕಾರಿಗಳು, ಖಾಸಗಿ ನೌಕರರು, ಜಿಎಸ್‌ಟಿ ಮರುಪಾವತಿ ಪಡೆಯುವ ವ್ಯಾಪಾರಸ್ಥರು, ಉದ್ದಿಮೆದಾರರು, ಶ್ರೀಮಂತರು ಯೋಜನೆಗೆ ಅರ್ಹರಾಗಿರುವುದಿಲ್ಲ.
ಆಹಾರ ಇಲಾಖೆ ವಿತರಿಸುವ ಅಂತ್ಯೋದಯ, ಬಿಪಿಎಲ್, ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಲಾದ ಮಹಿಳೆಯರು ಮಾತ್ರ ಯೋಜನೆಗೆ ಅರ್ಹರಾಗಿರುತ್ತಾರೆ. ಒಂದೇ ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರು ಇದ್ದಲ್ಲಿ ಒಬ್ಬರು ಮಾತ್ರ ಯೋಜನೆಗೆ ಅರ್ಹರಾಗಿರುತ್ತಾರೆ. ಆಗಸ್ಟ್ 15 ರಂದು ಆಯ್ಕೆಯಾದ ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುವುದು.