HomeCrimeBIG NEWS: ಪತ್ನಿಯನ್ನು ಬರ್ಬರವಾಗಿ ಕೊಂದು ನೇಣಿಗೆ ಶರಣಾದ ಪತಿ

BIG NEWS: ಪತ್ನಿಯನ್ನು ಬರ್ಬರವಾಗಿ ಕೊಂದು ನೇಣಿಗೆ ಶರಣಾದ ಪತಿ

ಹಾವೇರಿ: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ ಮಹಾಶಯ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಸಂಗೂರು ಗ್ರಾಮದಲ್ಲಿ ನಡೆದಿದೆ.

ಪತ್ನಿ ದಾಕ್ಷಾಣೆವ್ವ ಅವರನ್ನು ಕೊಲೆಗೈದು ಪತಿ ಪ್ರಭು ವಾರತಿ (52) ಮನೆ ಮುಂದೆ ನೇಣಿಗೆ ಕೊರಳೊಡ್ಡಿದ್ದಾನೆ. ಪ್ರಭು ಪತ್ನಿ ಶೀಲ ಶಂಕಿಸಿ ಪ್ರತಿ ನಿತ್ಯ ಗಲಾಟೆ ಮಾಡುತ್ತ. ಇದೇ ವಿಚಾರವಾಗಿ ಪತಿ-ಪತ್ನಿ ನಡುವೆ ನಿನ್ನೆಯೂ ಗಲಾಟೆಯಾಗಿದೆ. ಈ ವೇಳೆ ಮಚ್ಚಿನಿಂದ ಕೊಚ್ಚಿ ಪತ್ನಿಯನ್ನು ಕೊಲೆಗೈದಿದ್ದಾನೆ. ಬಳಿಕ ತಾನೂ ಮನೆ ಮುಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳಕ್ಕೆ ಹಾವೇರಿ ಜಿಲ್ಲೆಯ ಎಸ್ ಪಿ ಶಿವಕುಮಾರ್ ಗುಣಾರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular