
ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಅಧಿಕಾರಕ್ಕೆ ಬಂದು 25 ದಿನಕ್ಕೆ ಜನರ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಕಾಂಗ್ರೆಸ್ ನವರು ಜನರಿಗೆ ಟೋಪಿ ಹಾಕಿ ಕುತಂತ್ರದಿಂದ ಅಧಿಕಾರಕ್ಕೆ ಬಂದಿದ್ದಾರೆ. ಗ್ಯಾರಂಟಿ ಘೋಷಣೆ ಮಾಡಿ ಈಗ ಹಪಹಪಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಗ್ಯಾರಂಟಿ ಯೋಜನೆಗಳಿಗೆ 59 ಸಾವಿರ ಕೋಟಿ ರೂ. ಖರ್ಚಾಗುತ್ತದೆ. ರಾಜ್ಯದ ಮೂಲಭೂತ ಸೌಕರ್ಯಗಳನ್ನು ಹೇಗೆ ಈಡೇರಿಸುತ್ತೀರಾ? ಆರ್ಥಿಕವಾಗಿ ರಾಜ್ಯ ದಿವಾಳಿಯಾಗಲಿದೆ. ಆರ್ಥಿಕ ಪರಿಸ್ಥಿತಿ ಅರ್ಥ ಮಾಡಿಕೊಂಡು ಗ್ಯಾರಂಟಿ ಘೋಷಿಸಬೇಕಿತ್ತು ಎಂದು ಹೇಳಿದ್ದಾರೆ.

