ಬೆಂಗಳೂರು: ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿರುವ ವಿಚಾರವಾಗಿ ಮಾಜಿ ಸಚಿವ ಸುನೀಲ್ ಕುಮಾರ್ ಕಿಡಿಕಾರಿದ್ದಾರೆ.
ಅಧಿಕಾರಕ್ಕೆ ಬಂದು ಇನ್ನೂ ಒಂದು ತಿಂಗಳು ಕಳೆದಿಲ್ಲ ಈಗಲೇ ಸರ್ಕಾರ ಪಠ್ಯ ಪುಸ್ತಕ ಪರಿಷ್ಕರಣೆಗೆ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟ್ವಿಟರ್ ನಲ್ಲಿ ಸರ್ಕಾರದ ನಿರ್ಧಾರದ ಬಗ್ಗೆ ವಾಗ್ದಾಳಿ ನಡೆಸಿರುವ ಸುನೀಲ್ ಕುಮಾರ್, ಆರ್ ಎಸ್ ಎಸ್ ಸಂಸ್ಥಾಪಕ ಹೆಗಡೆವಾರ್, ಬನ್ನಂಜೆ ಗೋವಿಂದಾಚಾರ್ಯ ಪಠ್ಯ ಕೈಬಿಟ್ಟಿದ್ದು ಸರಿಯಲ್ಲ. ಅಧಿಕಾರಕ್ಕೆ ಬಂದು ಒಂದು ತಿಂಗಳು ಕಳೆಯುವಷ್ಟರಲ್ಲಿ ಸಿದ್ದರಾಮಯ್ಯ ಸರ್ಕಾರ ಪಠ್ಯ ಪುಸ್ತಕ ಪರಿಷ್ಕರಣೆಗೆ ಕೈ ಹಾಕಿದ್ದು ಸೂಕ್ತವಲ್ಲ ಎಂದು ಹೇಳಿದ್ದಾರೆ.
ಪಠ್ಯ ಪುಸ್ತಕದಲ್ಲಿ ಭಾರತೀಯತೆ, ಸಂಸ್ಕೃತಿ ಇತಿಹಾಸವಿದೆ. ಸತ್ಯವೇನು ಎಂಬುದನ್ನು ತಿಳಿಯದಂತೆ ಮುಚ್ಚಿಡುವ ಉದ್ದೇಶವೇನು? ಶಾಲೆಗಳಿಗೆ ಪಠ್ಯ ಪುಸ್ತಕ ಪೂರೈಕೆಯಾದ ನಂತರ ಪರಿಷ್ಕರಣೆ ಹಠವೇಕೆ? ಇತರೆ ವಿಚಾರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಗೆ ಅವಕಾಶ ನೀಡಿ. 2ನೇ ಬಾರಿ ಸಿಎಂ ಮಾಡಿದ್ದರೆಂಬ ಋಣ ತೀರಿಸಿಕೊಳ್ಳುವುದಕ್ಕಾಗಿ ಶಿಕ್ಷಣದಲ್ಲಿ ಗುಲಾಮಿ ಚಿಂತನೆ ತುರುಕುತ್ತಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.