HomeKarnatakaBIG NEWS: ಕಾಲೇಜು ಪ್ರಾಂಶುಪಾಲರ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ದೂರು ನೀಡಿದ ಉಪನ್ಯಾಸಕಿ

BIG NEWS: ಕಾಲೇಜು ಪ್ರಾಂಶುಪಾಲರ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ದೂರು ನೀಡಿದ ಉಪನ್ಯಾಸಕಿ

ಬಳ್ಳಾರಿ: ಕಾಲೇಜು ಪ್ರಾಂಶುಪಾಲರು ಲೈಗಿಂಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬಳ್ಳಾರಿಯ ASM ಮಹಿಳಾ ಕಾಲೇಜು ಉಪನ್ಯಾಸಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವೀರಶೈವ ವಿದ್ಯಾವರ್ಧಕ ಸಂಘದ ಎಎಸ್ಎಂ ಮಹಿಳಾ ಕಾಲೇಜು ಪ್ರಾಂಶುಪಾಲ ಶರಣಪ್ಪ ವಿರುದ್ಧ ದೂರು ದಾಖಲಾಗಿದೆ. ಪ್ರಾಂಶುಪಾಲ ಶರಣಪ್ಪ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಉಪನ್ಯಾಸಕಿ ಕಾಲೇಜು ಆಡಳಿತ ಮಂಡಳಿಗೆ ದೂರಿದ್ದರೂ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಉಪನ್ಯಾಸಕಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಾಂಶುಪಾಲ ಶರಣಪ್ಪ ಇದೇ ತಿಂಗಳು ನಿವೃತ್ತಿಯಾಗಲಿದ್ದು, ನಿವೃತ್ತಿಯ ಕೊನೇ ದಿನಗಳಲ್ಲಿ ಪ್ರಾಂಶುಪಾಲರ ವಿರುದ್ಧ ದೂರು ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular