BIG NEWS: ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದೇನು….?

ಉಡುಪಿ : ಶಾಲಾ ಪಠ್ಯಪುಸ್ತಕ ಪರಿಷ್ಕರಣೆ (Revision of school textbooks) ವಿಚಾರದ ಕುರಿತಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ (Home Minister Dr. G. Parameshwara) ಮಹತ್ವದ ಹೇಳಿಕೆ ನೀಡಿದ್ದು, ಪಠ್ಯಪರಿಷ್ಕರಣೆಗೆ ಬಗ್ಗೆ ಏಕಾಏಕಿ ನಿರ್ಧಾರ ತೆಗೆದುಕೊಳ್ಳಲು ಆಗಲ್ಲ ಎಂದು ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಚರ್ಚಿಸಿ ಮಾತನಾಡುತ್ತೇವೆ. ಏಕಾಏಕಿ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲು ಆಗಲ್ಲ. ಅವರಿವರು ಹೇಳಿದ ತಕ್ಷಣ ಸರ್ಕಾರದ ನಿರ್ಧಾರ ಎನ್ನಲಾಗಲ್ಲ. ಪಠ್ಯ ಪುಸ್ತಕ ವಿಚಾರದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುವುದಿಲ್ಲ ಎಂದು ತಿಳಸಿದ್ದಾರೆ.

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಕ್ಷಣ ತಜ್ಞ, ಶಿಕ್ಷಣ ಸಚಿವ ಮತ್ತು ಹಿರಿಯ ಸಾಹಿತಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದು, ಪಠ್ಯಪರಿಷ್ಕರಣೆಗೆ ಸಮಿತಿ ರಚನೆ ಮಾಡುವ ಕುರಿತಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read