HomeKarnatakaBIG NEWS: ವಿದ್ಯುತ್ ದರ ಏರಿಕೆ ನಮ್ಮ ಸರ್ಕಾರ ಮಾಡಿದ್ದಲ್ಲ; ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ

BIG NEWS: ವಿದ್ಯುತ್ ದರ ಏರಿಕೆ ನಮ್ಮ ಸರ್ಕಾರ ಮಾಡಿದ್ದಲ್ಲ; ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ

ಬೆಂಗಳೂರು: ವಿದ್ಯುತ್ ದರ ಏರಿಕೆ ವಿಚಾರವಾಗಿ ಸ್ಪಷ್ಟನೆ ನೀಡಿರುವ ಇಂಧನ ಸಚಿವ ಕೆ.ಜೆ. ಜಾರ್ಜ್, ನಮ್ಮ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಮಾಡಿದ್ದಲ್ಲ, ಹಿಂದಿನ ಬಿಜೆಪಿ ಸರ್ಕಾರದ ನಿರ್ಧಾರ ಈಗ ಜಾರಿಗೆ ಬಂದಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಇಂಧನ ಸಚಿವರು, ವಿದ್ಯುತ್ ದರ ಏರಿಕೆ ನಮ್ಮ ಸರ್ಕಾರದ ನಿರ್ಧಾರವಲ್ಲ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ದರ ಏರಿಕೆಯಾಗಿತ್ತು. ಚುನವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಾರಿಗೆ ಬಂದಿರಲಿಲ್ಲ. ಚುನಾವಣೆ ಮುಗಿದ ಬಳಿಕ ಹಿಂದಿನ ಆದೇಶ ಜಾರಿಗೆ ಬಂದಿದೆ. ನಮ್ಮ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿಲ್ಲ ಎಂದು ತಿಳಿಸಿದರು.

ನಮ್ಮ ಸರ್ಕಾರ ಬಡವರು, ಮಧ್ಯಮ ವರ್ಗದವರನ್ನು ರಕ್ಷಿಸುತ್ತಿದೆ. ಬಡವರು ಬಿಲ್ ಕಟ್ಟುವುದೇ ಬೇಡ ಎಂದು ಗೃಹಜ್ಯೋತಿ ಯೋಜನೆ ಜಾರಿ ಮಾಡಿದ್ದೇವೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular