
ಸುದ್ದಿಗಾರ ಜೊತೆಗೆ ಮಾತನಾಡಿದ ಅವರು, ಗೃಹ ಲಕ್ಷ್ಮಿ ಯೋಜನೆಯನ್ನು ಬಡವರನ್ನು ಗಮನದಲ್ಲಿಟ್ಟುಕೊಂಡು ಹಮ್ಮಿಕೊಳ್ಳಲಾಗಿದ್ದು, ಪ್ರತಿ ಮನೆಯ ಯಜಮಾನಿಗೆ 2,000 ರೂ. ನೀಡಲಾಗುತ್ತದೆ. ಆದರೆ ಆದಾಯ ತೆರಿಗೆ ಪಾವತಿಸುವವರಿಗೆ ಈ ಯೋಜನೆ ಅನ್ವಯವಾಗಲ್ಲ ಎಂದರು.
ಬಡವರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ನಿರ್ಧಾರ ಕೈಗೊಂಡಿದೆ. ಆಧಾಯ ತೆರಿಗೆ ಪಾವತಿಸುವ ಜನರು ಗೃಹ ಲಕ್ಷ್ಮೀ ಯೋಜನೆಯನ್ನು ಕೇಳುತ್ತಿಲ್ಲ. 2000 ರೂಪಾಯಿ ಬೇಡ ಎಂದು ಹಲವರು ಪತ್ರ ಬರೆದಿದ್ದಾರೆ ಎಂದು ಹೇಳಿದ್ದಾರೆ.

