
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಎಸ್ಎಸ್ ಎಲ್ ಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ.
ಜೂನ್ 12 ರಿಂದ 19 ರವರೆಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ಪರೀಕ್ಷಾ ಕೇಂದ್ರಗಳಿಂದ ಮನೆಗೆ ವಾಪಸ್ ತೆರಳುವಾಗ ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು ನಿರ್ವಾಹಕರಿಗೆ ತೋರಿಸಿ ಪ್ರಯಾಣಿಸಬಹುದಾಗಿದೆ.

