alex Certify ಸರ್ಕಾರಿ ನೌಕರರಿಗೆ ‘ಹಳೆ ಪಿಂಚಣಿ ಯೋಜನೆ’ ಜಾರಿಗೊಳಿಸುವಂತೆ ಡಿಸಿಎಂ ಡಿಕೆಶಿಗೆ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ‘ಹಳೆ ಪಿಂಚಣಿ ಯೋಜನೆ’ ಜಾರಿಗೊಳಿಸುವಂತೆ ಡಿಸಿಎಂ ಡಿಕೆಶಿಗೆ ಮನವಿ

ಬೆಂಗಳೂರು : ‘ಹಳೆ ಪಿಂಚಣಿ ಯೋಜನೆ’ ಜಾರಿಗೊಳಿಸುವಂತೆ ಡಿಸಿಎಂ ಡಿಕೆ ಶಿವಕುಮಾರ್ (DCM DK shivakumar) ಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಸಲ್ಲಿಸಿತು.

ಪ್ರಣಾಳಿಕೆಯಲ್ಲಿನ ಭರವಸೆಯಂತೆ ಎನ್.ಪಿ.ಎಸ್ (NPS) ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಹಾಗೂ 7ನೇ ವೇತನ ಆಯೋಗದ (7th Pay (Commission) ವರದಿಯನ್ನು ಪಡೆದು ಶೀಘ್ರ ಅನುಷ್ಠಾನಗೊಳಿಸುವಂತೆ ಮನವಿ ಮಾಡಲಾಯಿತು.

ಅಂತೆಯೇ ರಾಜ್ಯ ಸರ್ಕಾರಿ ನೌಕರರ ಸಂಘದಿಂದ (State Government Employees Association) ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರನ್ನು ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿರವರ ನೇತೃತ್ವದಲ್ಲಿ ಅಭಿನಂದಿಸಲಾಯಿತು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...