ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗಾಗಿ ಸಂಪನ್ಮೂಲ ಸಂಗ್ರಹಕ್ಕೆ ಒತ್ತು ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮದ್ಯದ ಮೇಲಿನ ಸುಂಕವನ್ನು 10 -15 ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಅಬಕಾರಿ ಇಲಾಖೆ ಬಿಯರ್ ಸೇರಿದಂತೆ ಮದ್ಯದ ಮೇಲಿನ ಸುಂಕ ಹೆಚ್ಚಳಕ್ಕೆ ಚಿಂತನೆ ನಡೆಸಿದೆ. ಬಿಯರ್ ಸೇರಿದಂತೆ ವಿವಿಧ ಮದ್ಯಗಳ ಬೆಲೆ ಹೆಚ್ಚಾಗಲಿದೆ. ಪ್ರತಿ ಬಾಟಲ್ ಬಿಯರ್ ದರ 10 -20 ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ. ಅದೇ ರೀತಿ ಬೇರೆ ಮದ್ಯದ ದರ ಹೆಚ್ಚಳ ಮಾಡುವ ಬಗ್ಗೆ ಚರ್ಚೆ ನಡೆದಿದ್ದು, ಇನ್ನೂ ಅಂತಿಮವಾಗಿಲ್ಲ. ಬಿಯರ್ ಸೇರಿ ಮದ್ಯದ ದರ ಮತ್ತಷ್ಟು ಹೆಚ್ಚಾದರೆ ಬಡವರು, ಮಧ್ಯಮ ವರ್ಗದ ಮೇಲೆ ಪರಿಣಾಮ ಉಂಟಾಗಲಿದೆ ಎಂದು ಹೇಳಲಾಗಿದೆ.