alex Certify ಶಿಕ್ಷಕರು, ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ವಯೋಮಿತಿ 2 ವರ್ಷ ಸಡಿಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರು, ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ವಯೋಮಿತಿ 2 ವರ್ಷ ಸಡಿಲಿಕೆ

ಬೆಂಗಳೂರು: ಶಿಕ್ಷಕರು, ಉಪನ್ಯಾಸಕರ ನೇಮಕಾತಿ ವಯೋಮಿತಿಯಲ್ಲಿ ಎರಡು ವರ್ಷ ಸಡಿಲಿಕೆ ಮಾಡಲಾಗಿದೆ. ಶಿಕ್ಷಕರು ಹಾಗೂ ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿ ಸಂದರ್ಭದಲ್ಲಿ ವಯೋಮಿತಿಯನ್ನು ಎರಡು ವರ್ಷ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕೊರೋನಾ ಸಂದರ್ಭದಲ್ಲಿ ಎರಡು ವರ್ಷ ನೇಮಕಾತಿ ನಡೆಯದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರು, ಸರ್ಕಾರಿ, ಅನುದಾನಿತ ಪಿಯು ಕಾಲೇಜು ಉಪನ್ಯಾಸಕರ ಹುದ್ದೆಗಳಿಗೆ ಮುಂದಿನ ಒಂದು ವರ್ಷದ ಅವಧಿಯಲ್ಲಿ ನಡೆಸಲಾಗುವ ನೇರ ನೇಮಕಾತಿಗಳಿಗೆ ಎರಡು ವರ್ಷ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ.

ಈ ಕುರಿತಾಗಿ ಅಭ್ಯರ್ಥಿಗಳು, ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳಿಂದ ಒತ್ತಾಯ ಕೇಳಿ ಬಂದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಯೋಮಿತಿ ಸಡಿಲಿಕೆ ಮಾಡಿದೆ.

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಹುದ್ದೆಗಳ ನೇಮಕಾತಿ ಮತ್ತು ಶಾಲಾ ಶಿಕ್ಷಕರ ನೇಮಕಾತಿಗೆ ಈ ಆದೇಶ ಅನ್ವಯವಾಗುತ್ತದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...