ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಕೆಲ ಬಿಜೆಪಿ ಸಂಸದರು ಸ್ಪರ್ಧಿಸುವ ಬಗ್ಗೆ ಅನುಮಾನ ವ್ಯಕ್ತವಾಗಿರುವ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಕೂಡ ಇಂತದ್ದೇ ಮಾತುಗಳನ್ನಾಡಿರುವುದು ಕುತೂಹಲ ಮೂಡಿಸಿದೆ.
ಮುಂದಿನ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸಬೇಕೋ ಬೇಡ್ವೋ ಎಂಬ ಗೊಂದಲದಲ್ಲಿದ್ದೇನೆ. ನನಗೆ ರಾಜಕಾರಣವೇ ಸಾಕಾಗಿ ಹೋಗಿದೆ ಎಂದು ಹೇಳಿದ್ದಾರೆ.
ಕುಣಿಗಲ್ ನಲ್ಲಿ ಮಾತನಾಡಿದ ಡಿ.ಕೆ. ಸುರೇಶ್, ಲೋಕಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಬಗ್ಗೆ ಕೆಲವರು ಮಾತನಾಡುತ್ತಿದ್ದಾರೆ. ನಾನು ಸ್ಪರ್ಧಿಸುತ್ತೇನೋ ಇಲ್ವೋ ಎಂಬುದನ್ನು ಇನ್ನೂ ತೀರ್ಮಾನ ಮಾಡಿಲ್ಲ, ನಾನು ಗೊಂದಲದಲ್ಲಿದ್ದೇನೆ. ಕಾರಣ ನನಗೆ ರಾಜಕಾರಣ ಬೇಕೋ ಬೇಡ್ವೋ ಎನಿಸಿಬಿಟ್ಟಿದೆ. ಮುಂದಿನ ದಿನಗಳಲ್ಲಿ ಜನರ ಸಲಹೆ ಪಡೆದು ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಮಾತುಗಳು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.