
ಬೆಂಗಳೂರು : ರಾಜ್ಯಕ್ಕೆ ಇನ್ನೂ ಕೂಡ ಮುಂಗಾರು
(Monsoon) ಆಗಮನವಾಗಿಲ್ಲ, ಹಲವು ಕಡೆ ಬಿಸಿಲ ಧಗೆ ಮುಂದುವರೆದಿದೆ. ರಾಜ್ಯದ ಹಲವು ಕಡೆ ನೀರಿಗೆ ಆಹಾಕಾರ ಉಂಟಾಗಿದೆ. ಈ ನಡುವೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದು ಸಂಜೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು, ನಾಳೆ ಭಾರಿ ಮಳೆ (the rain) ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳು. ಕರಾವಳಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗಾಳಿಯ ವೇಗ 30-40 ಕಿಮೀ ವೇಗ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆಯಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, , ಚಾಮರಾಜನಗರ, ತುಮಕೂರು, ಸೇರಿದಂತೆ ಹಲವು ಕಡೆಗಳಲ್ಲಿ ಮಳೆ ಬೀಳಲಿದೆ ಎಂದು ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಬೀಪೋರ್ ಜೊಯ್ ಚಂಡಮಾರುತದ ಹಿನ್ನೆಲೆ ಕರ್ನಾಟಕ, ಮಹಾರಾಷ್ಟ್ರ, ಕೇರಳ ಹಾಗೂ ಗುಜರಾತ್ ಕರಾವಳಿಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಚಂಡಮಾರುತದ ಎಚ್ಚರಿಕೆಯನ್ನು ನೀಡಿದೆ.