ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ ಹ್ಯಾಕರ್ ಗಳ ಹಾವಳಿ ಹೆಚ್ಚುತ್ತಿದೆ. ಪೊಲೀಸ್ ಇಲಾಖೆಯನ್ನೇ ಹ್ಯಾಕರ್ ಗಳು ಟಾರ್ಗೆಟ್ ಮಾಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಪೊಲೀಸ್ ಇಲಾಖೆಯ ಫೇಸ್ ಬುಕ್ ಪೇಜ್ ನ್ನು ಹ್ಯಾಕ್ ಮಾಡಿರುವ ಹ್ಯಾಕರ್ ಗಳು ಪೊಲೀಸ್ ಠಾಣೆಯ ಅಧಿಕೃತ ಪೇಜ್ ನಲ್ಲಿ ಅಶ್ಲೀಲ ವಿಡಿಯೋಗಳನ್ನು ಅಪ್ ಲೋಡ್ ಮಾಡಿದ್ದಾರೆ.
ಆಸಿಫ್ ನಗರ ಪೊಲೀಸ್ ಠಾಣೆಯ ಫೇಸ್ ಬುಕ್ ಪೇಜ್ ನಲ್ಲಿ ಅಶ್ಲೀಲ ವಿಡಿಯೋಗಳು ಹರಿದಾಡುತ್ತಿದ್ದು, ಪೊಲೀಸರೇ ದಂಗಾಗಿದ್ದಾರೆ. ವಿದೇಶಿ ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಹ್ಯಾಕರ್ ಗಳು ಅಪ್ ಲೋಡ್ ಮಾಡಿದ್ದಾರೆ. ತಕ್ಷಣ ಎಚ್ಚೆತ್ತ ಪೊಲೀಸರು ಸಿಸಿಎಸ್ ಗೆ ದೂರು ನೀಡಿದ್ದಾರೆ. ಆದರೂ ಪೊಲೀಸ್ ಠಾಣೆ ಫೇಸ್ ಬುಕ್ ಪೇಜ್ ನಲ್ಲಿ ಈಗಾಗಲೇ ಹರಿದಾಡುತ್ತಿರುವ ವಿಡಿಯೋಗಳನ್ನು ಇನ್ನೂ ಡಿಲಿಟ್ ಮಾಡಿಲ್ಲ ಎನ್ನಲಾಗಿದೆ.
ಇತ್ತೀಚೆಗೆ ಆಸಿಫ್ ನಗರ ಠಾಣೆಯ ಫೇಸ್ ಬುಕ್ ಪೇಜ್ ಸಕ್ರಿಯವಾಗಿರಲಿಲ್ಲ. ಡಿಸೆಂಬರ್ ನಲ್ಲಿ ಕೊನೇ ಪೋಸ್ಟ್ ಹಾಕಲಾಗಿತ್ತು. ಈಗ ಹ್ಯಾಕರ್ ಗಳು ಒಟ್ಟು ನಾಲ್ಕು ವಿಡಿಯೋಗಳನ್ನು ಅಪ್ ಲೋಡ್ ಮಾಡಿದ್ದು, ಭಾರಿ ಚರ್ಚೆಗೆ ಕಾರಣವಾಗಿದೆ. ತನಿಖೆ ಮುಂದುವರೆದಿದೆ.