HomeKarnatakaBreaking : 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ 'PDO' ಲೋಕಾಯುಕ್ತ ಬಲೆಗೆ

Breaking : 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ‘PDO’ ಲೋಕಾಯುಕ್ತ ಬಲೆಗೆ

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ (PDO) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅಗಳಕುಪ್ಪೆ ಗ್ರಾಮದಲ್ಲಿ ನಡೆದಿದೆ.

ಅಗಳಕುಪ್ಪೆ ಗ್ರಾಮ ಪಂಚಾಯತ್ ಪಿಡಿಒ ಎನ್. ನರಸಿಂಹಮೂರ್ತಿ ಎಂಬುವವರು ಖಾತೆ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ 2 ಲಕ್ಷ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ.

ನೆಲಮಂಗಲದ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ
(DYSP) ಡಿವೈಎಸ್ಪಿ ರೇಣುಕಾಪ್ರಸಾದ್ ನೇತೃತ್ವದಲ್ಲಿ ದಾಳಿ ನಡೆದಿದೆ. ಪಿಡಿಒ ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular