HomeKarnatakaBIG NEWS: ಸಿಪಿಐ ಲಿಂಗರಾಜು ಹೃದಯಾಘಾತದಿಂದ ಸಾವು

BIG NEWS: ಸಿಪಿಐ ಲಿಂಗರಾಜು ಹೃದಯಾಘಾತದಿಂದ ಸಾವು

ಚಿತ್ರದುರ್ಗ: ಸಿಪಿಐ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಸಿಪಿಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಲಿಂಗರಾಜು ಎಂಬುವವರು ಚಿತ್ರದುರ್ಗಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆ ಚಿತ್ರದುರ್ಗದಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ಲಿಂಗರಾಜ್, ನಿನ್ನೆ ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ತೆರಳಿದ್ದರು. ಚಿತ್ರದುರ್ಗ ನಗರದ ಖಾಸಗಿ ಲಾಡ್ಜ್ ನಲ್ಲಿ ವಾಸ್ತವ್ಯ ಮಾಡಿದ್ದರು. ಇಂದು ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿದ್ದಾರೆ. ಬಸವೇಶ್ವರ ಆಸ್ಪತ್ರೆಗೆ ತೆರಳುವಾಗ ಮಾರ್ಗಮಧ್ಯೆಯೇ ಸಿಪಿಐ ಲಿಂಗರಾಜ್ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ ನಗರ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular