HomeKarnataka‘ದೇಶಕ್ಕೆ ಗಂಡಾಂತರ ಕಾದಿದೆ, 2-3 ರಾಷ್ಟ್ರಗಳು ನೀರಿನಲ್ಲಿ ಮುಳುಗುತ್ತೆ’ : ಭಯಾನಕ ಭವಿಷ್ಯ ನುಡಿದ ಕೋಡಿಶ್ರೀ

‘ದೇಶಕ್ಕೆ ಗಂಡಾಂತರ ಕಾದಿದೆ, 2-3 ರಾಷ್ಟ್ರಗಳು ನೀರಿನಲ್ಲಿ ಮುಳುಗುತ್ತೆ’ : ಭಯಾನಕ ಭವಿಷ್ಯ ನುಡಿದ ಕೋಡಿಶ್ರೀ

ಇನ್ನೂ ಒಂದು ಗಂಡಾಂತರ ದೇಶಕ್ಕೆ ಕಾದಿದೆ. ಎರಡು ಮೂರು ರಾಷ್ಟ್ರಗಳು ನೀರಿನಲ್ಲಿ ಮುಳುಗಡೆಯಾಗಲಿದೆ ಎಂದು ಕೋಡಿಮಠದ ಡಾ ಶಿವಾನಂದ ಸ್ವಾಮೀಜಿ (Sivananda Swamiji) ಭವಿಷ್ಯ ನುಡಿದಿದ್ದಾರೆ.

ಇಂದು ಅವರು ಕೋಲಾರದ ಸುಗಟೂರು ಗ್ರಾಮದ ಯೋಗಿ ನಾರಾಯಣ ಮಠಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವರ್ಷ ಭಾರಿ ಗುಡುಗು, ಮಿಂಚು ಬರಲಿದೆ. ಎರಡು ಮೂರು ರಾಷ್ಟ್ರಗಳು ನೀರಿನಲ್ಲಿ ಮುಳುಗಡೆಯಾಗಲಿದೆ. ಎಲ್ಲೋ ನಡೆಯುವ ಬಾಂಬ್ ದಾಳಿ (Bomb attack) ಯಿಂದ ನಮಗೆ ಸಾಕಷ್ಟು ಅನಾಹುತ ಸಂಭವಿಸುತ್ತೆ ಎಂದು ಭವಿಷ್ಯ ನುಡಿದರು.

ಚುನಾವಣೆಗೂ ಮುನ್ನ ಭವಿಷ್ಯ ನುಡಿದಿದ್ದ ಕೋಡಿಮಠದ ಶ್ರೀ ಒಂದು ಸರ್ಕಾರ ಮಾತ್ರ ಅಧಿಕಾರಕ್ಕೆ ಬರುತ್ತದೆ, ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲ್ಲ ಎಂದು ಭವಿಷ್ಯ ನುಡಿದಿದ್ದರು. ಅಂತೆಯೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ.

ಇನ್ನೂ, 2023 ರಲ್ಲಿ ದೇಶದಲ್ಲಿ ದೊಡ್ಡ ಅವಘಡ ನಡೆಯುತ್ತದೆ ಎಂದು ಹೇಳಿದ್ದರು. ಹಾಗೆಯೇ ಒಡಿಶಾದಲ್ಲಿ ಭೀಕರ ರೈಲು ದುರಂತ (train disaster)
ನಡೆದು 280 ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಇದೀಗ ಭವಿಷ್ಯ ನುಡಿದ ಸ್ವಾಮೀಜಿ ‘ಒಂದು ಗಂಡಾಂತರ ದೇಶಕ್ಕೆ ಕಾದಿದೆ. ಎರಡು ಮೂರು ರಾಷ್ಟ್ರಗಳು ನೀರಿನಲ್ಲಿ ಮುಳುಗಡೆಯಾಗಲಿದೆ’ ಎಂದು ಭವಿಷ್ಯ ನುಡಿದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular