HomeKarnatakaBIG NEWS: ಅಪಾರ್ಟ್ ಮೆಂಟ್ ಬಳಿ ರಾಜಕಾಲುವೆ ಒತ್ತುವರಿ; ಅಧಿಕಾರಿಗಳ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್...

BIG NEWS: ಅಪಾರ್ಟ್ ಮೆಂಟ್ ಬಳಿ ರಾಜಕಾಲುವೆ ಒತ್ತುವರಿ; ಅಧಿಕಾರಿಗಳ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು ನಗರ ಪ್ರದಕ್ಷಿಣೆ ವೇಳೆ ರಾಜಕಾಲುವೆ ಒತ್ತುವರಿಯಾದ ಬಗ್ಗೆ ಪರಿಶೀಲನೆ ನಡೆಸಿದ್ದು, ದಿವ್ಯಶ್ರೀ ಅಪಾರ್ಟ್ ಮೆಂಟ್ ಬಳಿ ಒತ್ತುವರಿಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ದಿವ್ಯಶ್ರೀ ಅಪಾರ್ಟ್ ಮೆಂಟ್ ನಿಂದ ರಾಜಕಾಲುವೆ ಒತ್ತುವರಿಯಾಗಿರುವ ಬಗ್ಗೆ ಗರಂ ಆದ ಡಿ.ಕೆ. ಶಿವಕುಮಾರ್, ಈ ರೀತಿಯಾದರೆ ನೀರು ಸರಾಗವಾಗಿ ಹರಿಯಲು ಹೇಗೆ ಸಾಧ್ಯ ? ತಕ್ಷಣ ಒತ್ತುವರಿ ತೆರವು ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

12 ಮೀಟರ್ ರಾಜಕಾಲುವೆ ಜಾಗದಲ್ಲಿ 7 ಮೀಟರ್ ಒತ್ತುವರಿ ಮಾಡಿಕೊಳ್ಳಲಾಗಿದೆ. ಹೀಗಿದ್ದರೆ ಮಳೆ ಬಂದಾಗ ಮತ್ತೆ ಪ್ರವಾಹ ಉಂಟಾಗುತ್ತದೆ. ಕೂಡಲೆ ಒತ್ತುವರಿ ತೆರವುಗೊಳಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular