HomeKarnatakaBIG NEWS: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು

BIG NEWS: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಮಂಡ್ಯ ಜಿಲ್ಲೆಯ ಬಿಜೆಪಿ ವಕ್ತಾರ ಸಿ.ಟಿ. ಮಂಜುನಾಥ್ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಕೃಷಿ ಸಚಿವ ಚಲುವರಾಯಸ್ವಾಮಿ, ನಾಗಮಂಗಲದ ಕೃತಜ್ಞತಾ ಸಮಾರಂಭದಲ್ಲಿ ನನಗೆ ಮತ ಹಾಕದವರಿಗೆ ಒಂದು ಸಹಿ ಕೂಡ ಮಾಡಿಕೊಡುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಸಚಿವರ ವಿರುದ್ಧ ದೂರು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದ್ವೇಷ, ತಾರತಮ್ಯ ಮಾಡದೇ ಸಂವಿಧಾನದ ಆಶಯದಂತೆ ಕೆಲಸ ಮಾಡುವುದಾಗಿ ಪ್ರಮಾಣವಚನ ಸ್ವೀಕರಿಸಿದ ಸಚಿವರು ಈಗ ತಾರತಮ್ಯದ ಮಾತನಾಡುತ್ತಿದ್ದಾರೆ. ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular