
ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವರು ಹಣೆ ಮೇಲೆ ಕುಂಕುಮ ಇಡಬಾರದು ಎಂದು ಎಲ್ಲೂ ಹೇಳಿಲ್ಲ, ಪೊಲೀಸರಿಗೆ ಯೂನಿಫಾರ್ಮ್ (Uniform) ಇರುತ್ತದೆ, ಅವರಿಗೆ ತನ್ನದೇ ಆದ ನಿಯಮ ಇರುತ್ತದೆ. ಆ ನಿಯಮಗಳ ವ್ಯಾಪ್ತಿಯಲ್ಲಿ ಏನು ಬೇಕಾದರೂ ಮಾಡಿಕೊಳ್ಳಬಹುದು. ಸುಮ್ಮನೆ ಗೊಂದಲ ಸೃಷ್ಟಿಸಬೇಡಿ. ಬೊಟ್ಟು, ವಿಭೂತಿ ಏನೂ ಬೇಕಾದರೂ ಇಟ್ಟುಕೊಳ್ಳಬಹುದು ಎಂದರು.
ಕರಾವಳಿ ಭಾಗ ಸೇರಿದಂತೆ ರಾಜ್ಯದ ಕೆಲವು ಕಡೆ ನೈತಿಕ ಪೊಲೀಸ್ ಗಿರಿ ನಡೆಯುತ್ತಿದೆ. ಆಗಸ್ಟ್ 15 ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ (Drug free) ಪ್ರದೇಶವಾಗಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದರು.

