
ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ (examination centres) ಸುತ್ತ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷೆ ನಡೆಯುವ ವೇಳೆ ಯಾವುದೇ ರೀತಿಯ ಅಕ್ರಮ, ನಡೆಯದಂತೆ ತಡೆಗಟ್ಟಲು ಸಿ.ಆರ್.ಪಿ.ಸಿ 1973 ಕಲಂ 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಜೆರಾಕ್ಸ್, ಟೈಪಿಂಗ್ ಸೈಬರ್ ಸೆಂಟರ್ ನಿಷೇಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರದ ಸುತ್ತ ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ.

