HomeKarnatakaBIG NEWS: ಎಎಸ್ಐ ಸೇರಿ ಇಬ್ಬರು ಪೊಲೀಸರು ಸಸ್ಪೆಂಡ್

BIG NEWS: ಎಎಸ್ಐ ಸೇರಿ ಇಬ್ಬರು ಪೊಲೀಸರು ಸಸ್ಪೆಂಡ್

ತುಮಕೂರು: ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ಓರ್ವ ಎಎಸ್ಐ ಸೇರಿ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಕಳ್ಳಂಬೆಳ್ಳ ಠಾಣೆ ಎಎಸ್ಐ ಚಿದಾನಂದ ಸ್ವಾಮಿ ಹಾಗೂ ಪೊಲೀಸ್ ಜೀಪ್ ಚಾಲಕ ಚಿಕ್ಕಹನುಮಯ್ಯ ಅವರನ್ನು ಅಮಾನತು ಮಾಡಿ ತುಮಕೂರು ಎಸ್ ಪಿ ರಾಹುಲ್ ಕುಮಾರ್ ಶಹಪುರ್ ವಾಡ್ ಆದೇಶ ಹೊರಡಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ತುಮಕೂರಿನ ಶಿರಾ ಬಳಿ ಲಾರಿಗಳನ್ನು ತಡೆದು 200, 300 ರೂಪಾಯಿ ಹಣ ವಸೂಲಿ ಮಾಡುತ್ತಿದ್ದರು. ಪೊಲೀಸರು ಹಣ ಪಡೆಯುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪೊಲೀಸರು ಹಣ ಪಡೆಯುತ್ತಿರುವುದು ಶಿರಾ ಇನ್ಸ್ ಪೆಕ್ಟರ್ ನೀಡಿದ್ದ ವರದಿಯಲ್ಲಿಯೂ ಸಾಬೀತಾದ ಹಿನ್ನೆಲೆಯಲ್ಲಿ ಎಎಸ್ಐ ಸೇರಿ ಇಬ್ಬರನ್ನು ಅಮಾನತುಗೊಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular