HomeKarnatakaBIG NEWS: ಇಂದು ಅಥವಾ ನಾಳೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ; ಕೃಷಿ ಸಚಿವರಿಂದ ಮಾಹಿತಿ

BIG NEWS: ಇಂದು ಅಥವಾ ನಾಳೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ; ಕೃಷಿ ಸಚಿವರಿಂದ ಮಾಹಿತಿ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿದ್ದು, ಇಂದು ಅಥವಾ ನಾಳೆಯೊಳಗೆ ಜಿಲ್ಲಾ ಉಸ್ತುವಾರಿ ಸಚಿವರನ್ನೂ ನೇಮಕ ಮಾಡಲಾಗುವುದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇಂದು ಅಥವಾ ನಾಳೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗಲಿದೆ. ಕೆಲ ಜಿಲ್ಲೆಗಳಿಗೆ ಸಚಿವರಿಲ್ಲ. ಇದೆಲ್ಲವನ್ನೂ ಪರಿಗಣಿಸಿ ಸೂಕ್ತವಾಗಿ ನಿರ್ಧರಿಸಬೇಕು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಸೂಕ್ತವಾಗಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular