ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ (State Congress government)ವು ಘೋಷಿಸಿರುವ ಗೃಹಲಕ್ಷ್ಮೀ ಯೋಜನೆ(Grihalakshmi Scheme)ಯ ಮಾದರಿ ಅರ್ಜಿ (Sample Application) ಗೊಂದಲದ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Minister Laxmi Hebbalkar) ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಅಸಲಿಯಾಗಿದೆ. ಆದರೆ ಅರ್ಜಿ ನಮೂನೆಯಲ್ಲಿ ಕೆಲವೊಂದು ಬದಲಾವಣೆ ಮಾಡಲಾಗುವುದು. ದಾಖಲೆಗಳಲ್ಲಿ ಬ್ಯಾಂಕ್ ಪಾಸ್ ಬುಕ್ ಸೇರಿಸಲಾಗುವುದು. ಕಾಲಂನಲ್ಲಿ ಜಾತಿ ಅಂತಾ ಇರುವುದನ್ನು ತೆಗೆದು ವರ್ಗಾ ಅಂತಾ ಸೇರಿಸುತ್ತೇವೆ. ಯಾಕೆಂದರ ಜನರಿಗೆ ತಪ್ಪು ಸಂದೇಶ ಹೋಗಬಾರದು ಎಂದು ಹೇಳಿದ್ದಾರೆ.
ಇನ್ನು ರಾಜ್ಯ ಕಾಂಗ್ರೆಸ್ ಘಟಕವು, ಮಾಧ್ಯಮಗಳು ಹೊಣೆಗಾರಿಕೆಯಿಂದ ವರ್ತಿಸಬೇಕು, ಪತ್ರಿಕಾ ಧರ್ಮಕ್ಕೆ ಚ್ಯುತಿ ಬಾರದಂತೆ ನಡೆದುಕೊಂಡಾಗ ಮಾತ್ರ ಸ್ವಸ್ಥ ಸಮಾಜ ರೂಪಿಸಲು ಸಾಧ್ಯ. ನಮ್ಮ ಸರ್ಕಾರದ ಬಗ್ಗೆ ರಚನಾತ್ಮಕ ಟೀಕೆ, ವಿಮರ್ಶೆ, ಸಲಹೆಗಳಿಗೆ ಸದಾ ಸ್ವಾಗತವಿರುತ್ತದೆ. ಆದರೆ ಉದ್ದೇಶಪೂರ್ವಕವಾಗಿ ನಕಾರಾತ್ಮಕ ಅಭಿಪ್ರಾಯ ಮೂಡಿಸುವ ಪ್ರಯತ್ನ ಮಾಡಬೇಡಿ ಎಂಬುದು ನಮ್ಮ ಕಳಕಳಿಯ ಮನವಿ ಎಂದು ಟ್ವೀಟ್ ಮಾಡಿದೆ.