HomeKarnatakaKKRDB ಅಕ್ರಮಗಳ ತನಿಖೆಗೆ ಮುಂದಾದ ಕಾಂಗ್ರೆಸ್‌ ಸರ್ಕಾರ

KKRDB ಅಕ್ರಮಗಳ ತನಿಖೆಗೆ ಮುಂದಾದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ-KKRDBಯಲ್ಲಿ ನಡೆದಿರುವ ಅಕ್ರಮಗಳ ತನಿಖೆಗೆ ಆದೇಶ ನೀಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕೆ ಕೆ ಆರ್ ಡಿ ಬಿಯಲ್ಲಿ ನಡೆದ ಅಕ್ರಮಗಳ ಬಗ್ಗೆ ತನಿಖೆ ನಡೆಸುವುದಾಗಿ ವಾಗ್ದಾನ ಮಾಡಿದ್ದೆವು. ಈಗ ಅಕ್ರಮಗಳ ತನಿಖೆಗೆ ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮ್ಮ ಭಾಗದ ಜನರ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣ ದುರುಪಯೋಗ ಪಡಿಸಿಕೊಂಡು, ಅಕ್ರಮದಲ್ಲಿ ಭಾಗಿಯಾದ ಎಲ್ಲರ ಮೇಲೂ ನಮ್ಮ ಸರ್ಕಾರ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಿದೆ. ನಾವು ನುಡಿದಂತೆ ನಡೆದುಕೊಳ್ಳುತ್ತೇವೆ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular