
ನಟ ಶರಣ್ ರಾಜ್ ಜೂನ್ 8ರಂದು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾರೊಂದು ನಟನ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಶರಣ್ ರಾಜ್ ಅವರ ಪಾರ್ಥಿವ ಶರೀರವನ್ನು (body) ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ತಮಿಳಿನಲ್ಲಿ ಪೋಷಕ ನಟರಾಗಿರುವ ಪಳನಿಯಪ್ಪನ್ ಅವರು ಕುಡಿದ ಅಮಲಿನಲ್ಲಿ ಕಾರನ್ನು ಓಡಿಸಿ ಶರಣ್ ರಾಜ್ ಗೆ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ . ಶರಣ್ ರಾಜ್ ‘ವಡಾ ಚೆನ್ನೈ’ (‘Asuran’) ಅಸುರನ್ ಸೇರಿ ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. ನಟನ ನಿಧನಕ್ಕೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

