ಮಂಗಳೂರು : ‘ಬಿಪೊರ್ ಜಾಯ್’ ಚಂಡಮಾರುತ (Cyclone Biparjoy) ಮುನ್ನೆಚ್ಚರಿಕೆ ಹಿನ್ನೆಲೆ ಬೀಚ್ ಗಳಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.
ಕರಾವಳಿಯಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ವೇಗವಾಗಿ ಗಾಳಿ ಬೀಸುತ್ತಿದೆ. ಉಳ್ಳಾಲ, ಉಚ್ಚಿಲ, ಸೋಮೇಶ್ವರದಲ್ಲಿ ಅಲೆ (wave) ಗಳು ಜೋರಾಗಿ ಆರ್ಭಟಿಸುತ್ತಿದ್ದು, ಬೀಚ್ ಗಳಿಗೆ ತೆರಳದಂತೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಮುದ್ರ ಪ್ರದೇಶಗಳಲ್ಲಿ ಪೊಲೀಸ್ ಹಾಗೂ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಜೂನ್ 8 ರಂದು ರಾತ್ರಿ 11:30 ಕ್ಕೆ ಗೋವಾದ ಪಶ್ಚಿಮ-ನೈಋತ್ಯಕ್ಕೆ 840 ಕಿಲೋಮೀಟರ್ ಮತ್ತು ಮುಂಬೈನ ಪಶ್ಚಿಮ-ನೈಋತ್ಯಕ್ಕೆ 870 ಕಿ.ಮೀ ದೂರದಲ್ಲಿರುವ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಲ್ಲಿ ಅತ್ಯಂತ ತೀವ್ರವಾದ ಚಂಡಮಾರುತ ಕಂಡುಬಂದಿದೆ.