ಬೆಂಗಳೂರು : ಜೂನ್ 15 ರಂದು ಗುರುವಾರ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ( State govt Cabinet meeting) ನಿಗದಿಯಾಗಿದೆ.
ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಗುರುವಾರ ಬೆಳಗ್ಗೆ 11 :00 ಗಂಟೆಗೆ ಸಭೆ ಆರಂಭವಾಗಲಿದ್ದು, ಸಭೆಯಲ್ಲಿ ಸಚಿವರು, ಶಾಸಕರು ಹಾಜರಿರಲಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಹಲವು ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆಯಿದೆ.
ಸಚಿವ ಸಂಪುಟದ 2023 ನೇ ಸಾಲಿನ 2 ನೇ ಸಭೆಯನ್ನು ವಿಧಾನಸೌಧದದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದು ಸರ್ಕಾರದ ಜಂಟಿ ಕಾರ್ಯದರ್ಶಿ ಆರ್ ಚಂದ್ರಶೇಖರ್ ಪ್ರಕಟಣೆ ಹೊರಡಿಸಿದ್ದಾರೆ.