alex Certify ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಉದ್ಘಾಟನೆಗೆ ಡಿಸಿಎಂ ಗೈರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಉದ್ಘಾಟನೆಗೆ ಡಿಸಿಎಂ ಗೈರು

ಬೆಂಗಳೂರು: ಜೂನ್ 11 ರಂದು ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಶಕ್ತಿ ಯೋಜನೆ ಉದ್ಘಾಟನೆ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೈರುಹಾಜರಾಗಲಿದ್ದಾರೆ.

ಶನಿವಾರ ಬೆಳಗ್ಗೆ ಡಿ.ಕೆ. ಶಿವಕುಮಾರ್ ಹೆಚ್ಎಎಲ್ ನಿಂದ ವಿಶೇಷ ವಿಮಾನದಲ್ಲಿ ಮಧ್ಯಪ್ರದೇಶದ ಗ್ವಾಲಿಯರ್ ಗೆ ತೆರಳಲ್ಲಿದ್ದಾರೆ. ಭಗಲಾಮುಖಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಡಿಸಿಎಂ ನಂತರ ಉಜ್ಜಯಿನಿಗೆ ತೆರಳಿ ವಾಸ್ತವ್ಯ ಹೂಡಲಿದ್ದಾರೆ. ಭಾನುವಾರ ಉಜ್ಜೈನಿಯ ಮಹಾಕಾಲ ಮಂದಿರದಲ್ಲಿ ಭಸ್ಮ ಆರತಿ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸುವರು. ಭಾನುವಾರ ಸಂಜೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ. ಹೀಗಾಗಿ ಅವರು ಭಾನುವಾರ ಬೆಳಿಗ್ಗೆ ನಡೆಯಲಿರುವ ಶಕ್ತಿ ಯೋಜನೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲವೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...