HomeKarnatakaಮೆಂಥೋಪ್ಲಸ್ ಡಬ್ಬಿ ಗಂಟಲಲ್ಲಿ ಸಿಲುಕಿ ಮಗು ಸಾವು

ಮೆಂಥೋಪ್ಲಸ್ ಡಬ್ಬಿ ಗಂಟಲಲ್ಲಿ ಸಿಲುಕಿ ಮಗು ಸಾವು

ಬಳ್ಳಾರಿ: ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದ ಐದನೇ ವಾರ್ಡ್ ಇಂದಿರಾ ನಗರದಲ್ಲಿ ನಡೆದಿದೆ.

ಮುತ್ಯಾಲ ರಾಘವೇಂದ್ರ ಮತ್ತು ತುಳಸಿ ದಂಪತಿಯ ಏಕೈಕ ಪುತ್ರಿ ಪ್ರಿಯದರ್ಶಿನಿ ಮೃತಪಟ್ಟ ಮಗು ಎಂದು ಹೇಳಲಾಗಿದೆ. ಮನೆಯಲ್ಲಿ ಆಟವಾಡಿಕೊಂಡಿದ್ದ ಮಗು ಕೈಗೆ ಸಿಕ್ಕ ಮೆಂಥೋಪ್ಲಸ್ ಡಬ್ಬಿಯನ್ನು ನುಂಗಿದ್ದು, ಅದು ಗಂಟಲಲ್ಲಿ ಸಿಲುಕಿ ಉಸಿರಾಟದ ತೊಂದರೆಯಾಗಿ ಜೋರಾಗಿ ಆಳಲು ಶುರು ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ತಾಯಿ ಮಗುವಿನ ಗಂಟಲಿಗೆ ಕೈ ಹಾಕಿ ಡಬ್ಬಿ ತೆಗೆಯಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ. ಕೂಡಲೇ ಸಮೀಪದ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೊರಟಿದ್ದು ಮಾರ್ಗಮಧ್ಯೆಯೇ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ.

ದಂಪತಿಗೆ ಮದುವೆಯಾಗಿ 10 ವರ್ಷದ ನಂತರ ಮಗುವಾಗಿದ್ದು, ಕಂದನನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular