ಬೆಂಗಳೂರು: ಬಿಪರ್ ಜಾಯ್ ಚಂಡಮಾರುತ ಪ್ರಭಾವದಿಂದ ಕರಾವಳಿ ಜಿಲ್ಲೆಯಲ್ಲಿ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿಸಮುದ್ರದಲ್ಲಿ ಉಂಟಾದ ಬಿಪರ್ ಜಾಯ್ ಚಂಡಮಾರುತ ಪರಿಣಾಮ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂನ್ 10 ರಿಂದ 12 ರವರೆಗೆ ವ್ಯಾಪಕ ಮಳೆ ಆಗಲಿದೆ. ಹೀಗಾಗಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಕಡಲ ತೀರಗಳಲ್ಲಿ ಸಮುದ್ರದ ಅಲೆಯ ಅಬ್ಬರ ಹೆಚ್ಚಾಗಿದೆ. ಗೋಕರ್ಣ, ಕುಡ್ಲೇ, ಓಂ ಬೀಚ್ ಗಳಲ್ಲಿ ಅಬ್ಬರ ಹೆಚ್ಚಾಗಿದೆ.