
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಯೋಜನೆಗಳನ್ನು ಜಾರಿ ಮಾಡುತ್ತಿದ್ದೇವೆ. ನಾವು ನುಡಿದಂತೆ ನಡೆಯುವವರು. ಏನು ಹೇಳುತ್ತೇವೆಯೋ ಅದರಂತೆ ನಾವು ನಡೆಯುತ್ತೇವೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರು ಎಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ? ಉದ್ಯೋಗ ಸೃಷ್ಟಿ ಮಾಡ್ತೀವಿ ಎಂದು ಮಾಡಿಲ್ಲ, ರೈತರ ಆದಾಯ ಡಬಲ್ ಮಾಡ್ತೀವಿ ಎಂದು ಮಾಡಿಲ್ಲ. ಪ್ರಧಾನಿ ಮೋದಿಯವರು ಕೊಟ್ಟ ಯಾವ ಭರವಸೆ ಈಡೇರಿಸಿದ್ದಾರೆ? ಎಂದು ಪ್ರಶ್ನಿಸಿದರು.

