ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತಗೊಂಡಿದೆ. ಆದರೆ ಕಳೆದ 24 ಗಂಟೆಯಲ್ಲಿ ನಿನ್ನೆಗಿಂತ ಹೆಚ್ಚಿನ ಪ್ರಕರಣ ಪತ್ತೆಯಾಗಿದೆ. 186 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 531888 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಕೋವಿಡ್ ಸಕ್ರಿಯ ಪ್ರಕರಣಗಳು ಇನ್ನಷ್ಟು ಕಡಿಮೆಯಾಗಿದ್ದು, ದೇಶದಲ್ಲಿ 2501 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 44458259 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 781 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,29,668 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 88,112 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.