ಮೈಸೂರು : ನಾಳೆ ಮಹಿಳೆಯರ ಶಕ್ತಿ ಯೋಜನೆಗೆ ( Shakti Yojane) ಚಾಲನೆ ನೀಡಲಾಗುತ್ತಿದ್ದು, ಮಧ್ಯಾಹ್ನ 1ರಿಂದ ರಾಜಾದ್ಯಂತ ಉಚಿತ ಸಂಚಾರ ಆರಂಭಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಮಹಿಳೆಯರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆಗೆ ಚಾಲನೆ ನೀಡುತ್ತೇವೆ. ನಾಳೆಯಿಂದ ಮಹಿಳೆಯರು ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ ಎಂದರು.
ನಾಳೆ 1 ಗಂಟೆಯಿಂದ ಉಚಿತ ಬಸ್ ಸೇವೆ ನೀಡಲಿದ್ದು, ಬಸ್ ನಿಲ್ದಾಣಗಳಲ್ಲಿ ಬಸ್ ನಿಲ್ಲಿಸದಿದ್ದರೆ ಕ್ರಮ ಕೈಗೊಳ್ಳಲು ಎಂಡಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ನಿಲುಗಡೆ ಪ್ರದೇಶಗಳಲ್ಲಿ ಕಡ್ಡಾಯವಾಗಿ ಚಾಲಕರು ಬಸ್ ನಿಲ್ಲಿಸಬೇಕು ಎಂದರು. ಬಸ್ ನಿಲ್ದಾಣಗಳಲ್ಲಿ ಬಸ್ ನಿಲ್ಲಿಸದಿದ್ದರೆ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.