alex Certify ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಹಾಗೂ ಅಬ್ದುಲ್ ಖಾದರ್ ಗೆ ಗೌರವ ಡಾಕ್ಟರೇಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಹಾಗೂ ಅಬ್ದುಲ್ ಖಾದರ್ ಗೆ ಗೌರವ ಡಾಕ್ಟರೇಟ್

ಧಾರವಾಡ: ಉತ್ತರ ಕನ್ನಡ ಜಿಲ್ಲೆಯ ವೃಕ್ಷಮಾತೆ ಖ್ಯಾತಿಯ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಹಾಗೂ ಕೃಷಿ ಉಪಕರಣಗಳ ಸಂಶೋಧಕ ಅಬ್ದುಲ್ ಖಾದರ್ ಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಿಸಿದೆ.

ಧಾರವಾಡ ಕೃಷಿ ವಿಶ್ವ ವಿದ್ಯಾಲಯದ 36ನೇ ಘಟಿಕೋತ್ಸವದಲ್ಲಿ ತುಳಸಿ ಗೌಡ ಹಾಗೂ ಅಬ್ದುಲ್ ಖಾದರ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ ಎಂದು ವಿವಿ ತಿಳಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿಯ ತುಳಸಿಗೌಡ ಅವರು ಪ್ರತಿ ವರ್ಷ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಪೋಷಿಸುತ್ತಾರೆ. ಅವರ ಸಾಧನೆಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ಪದ್ಮಶ್ರೀ ಪ್ರಶಸ್ತಿ ಲಭ್ಯವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...