ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ವಿಸ್ತರಣೆಗೆ ಕೇಂದ್ರ ಸರ್ಕಾರ 273 ಕೋಟಿ ರೂ. ಬಿಡುಗಡೆ ಮಾಡಿದೆ. ಟರ್ಮಿನಲ್ ಕಟ್ಟಡ ಸೇರಿದಂತೆ ಇತರೆ ಸೌಲಭ್ಯಗಳ ಸುಧಾರಣೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ 273 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ
ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ಸಂಬಂಧಿಸಿದಂತೆ ನಮ್ಮ ಪ್ರಸ್ತಾವನೆಗೆ ಶೀಘ್ರವಾಗಿ ಸ್ಪಂದಿಸಿ 273 ಕೋಟಿ ರೂ.ಬಿಡುಗಡೆ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂದಿಯಾ ಅವರಿಗೆ ಸಮಸ್ತ ಉತ್ತರ ಕರ್ನಾಟಕದ ಜನತೆಯ ಪರವಾಗಿ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
ನೂತನ ಯೋಜನೆಯಂತೆ ವಿಮಾನ ನಿಲ್ದಾಣದ ಟರ್ಮಿನಲ್ 20,000 ಚ.ಮೀ ವಿಸ್ತರಣೆಗೊಳ್ಳಲಿದ್ದು(ನೆಲಮಹಡಿ ಹಾಗೂ ಮೊದಲ ಮಹಡಿ ಸೇರಿ) ಹಾಗೂ ಏಕಕಾಲಕ್ಕೆ 1400ಕ್ಕೂ ಅಧಿಕ ಪ್ರಯಾಣಿಕರನ್ನು(ಆಗಮಿಸುವ ಮತ್ತು ನಿರ್ಗಮಿಸುವ) ನಿರ್ವಹಿಸುವ ಸಾಮರ್ಥ್ಯ ಹೊಂದಲಿದೆ. ವಿಸ್ತರಣೆ ಕಾಮಗಾರಿ ಜನವರಿಯಲ್ಲಿ ಆರಂಭವಾಗಲಿದ್ದು, ಎರಡು ವರ್ಷಗಳಲ್ಲಿ ಪ್ರಯಾಣಿಕರ ಉಪಯೋಗಕ್ಕೆ ಮುಕ್ತವಾಗಿಸುವ ಗುರಿ ಹೊಂದಿದೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ಸಂಬಂಧಿಸಿದಂತೆ ನಮ್ಮ ಪ್ರಸ್ತಾವನೆಗೆ ಶೀಘ್ರವಾಗಿ ಸ್ಪಂದಿಸಿ ರೂ.273 ಕೋಟಿ ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ @NarendraModi ಜೀ ಹಾಗೂ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ @JM_Scindia ಅವರಿಗೆ ಸಮಸ್ತ ಉತ್ತರ ಕರ್ನಾಟಕದ ಜನತೆಯ ಪರವಾಗಿ ಧನ್ಯವಾದಗಳು.
— Pralhad Joshi (@JoshiPralhad) June 10, 2023
ವಿಸ್ತರಣೆ ಕಾಮಗಾರಿ ಜನವರಿಯಲ್ಲಿ ಆರಂಭವಾಗಲಿದ್ದು, ಎರಡು ವರ್ಷಗಳಲ್ಲಿ ಪ್ರಯಾಣಿಕರ ಉಪಯೋಗಕ್ಕೆ ಮುಕ್ತವಾಗಿಸುವ ಗುರಿ ಹೊಂದಿದೆ.
— Pralhad Joshi (@JoshiPralhad) June 10, 2023