HomeKarnatakaಶನಿವಾರವೇ ರಾಜ್ಯಕ್ಕೆ ಮುಂಗಾರು ಪ್ರವೇಶ: ಇನ್ನೆರಡು ದಿನದಲ್ಲಿ ಹಲವು ಪ್ರದೇಶಗಳಿಗೆ ವಿಸ್ತರಣೆ

ಶನಿವಾರವೇ ರಾಜ್ಯಕ್ಕೆ ಮುಂಗಾರು ಪ್ರವೇಶ: ಇನ್ನೆರಡು ದಿನದಲ್ಲಿ ಹಲವು ಪ್ರದೇಶಗಳಿಗೆ ವಿಸ್ತರಣೆ

ಬೆಂಗಳೂರು: ಗುರುವಾರ ಕೇರಳಕ್ಕೆ ಪ್ರವೇಶಿಸಿದ್ದ ಮುಂಗಾರು ರಾಜ್ಯಕ್ಕೆ ಶನಿವಾರ  ಎಂಟ್ರಿ ಕೊಟ್ಟಿದೆ. ಮುಂದಿನ ಎರಡು ದಿನಗಳಲ್ಲಿ ಮತ್ತಷ್ಟು ಪ್ರದೇಶಗಳಿಗೆ ವ್ಯಾಪಿಸಲಿದೆ.

ಮಡಿಕೇರಿ, ಕಾರವಾರದವರೆಗೆ ಮುಂಗಾರು ಮಳೆ ವ್ಯಾಪಿಸಿದ್ದು ರಾಜ್ಯದ ಹಲವು ಪ್ರದೇಶಗಳಿಗೆ ವಿಸ್ತರಿಸಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಐದು ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ. ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗಲಿದೆ. ಜೂನ್ 11 ರಿಂದ 15 ರವರೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಸಾಧಾರಣ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular