HomeBusinessರಾಜ್ಯದ ಜನತೆಗೆ ವಿದ್ಯುತ್ ಶಾಕ್: ಬಿಲ್ ವ್ಯವಸ್ಥೆಯಲ್ಲಿ ಬದಲಾವಣೆ: 100 ಯೂನಿಟ್ ಮೀರಿದ್ರೆ ಪ್ರತಿ ಯೂನಿಟ್...

ರಾಜ್ಯದ ಜನತೆಗೆ ವಿದ್ಯುತ್ ಶಾಕ್: ಬಿಲ್ ವ್ಯವಸ್ಥೆಯಲ್ಲಿ ಬದಲಾವಣೆ: 100 ಯೂನಿಟ್ ಮೀರಿದ್ರೆ ಪ್ರತಿ ಯೂನಿಟ್ ಗೆ 7 ರೂ.

ಬೆಂಗಳೂರು: ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಬಿಸಿ ತಟ್ಟಿದೆ. ನಾಲ್ಕು ಸ್ತರದ ವಿದ್ಯುತ್ ಬಿಲ್ ವ್ಯವಸ್ಥೆ ಬದಲಾಯಿಸಿ ಎರಡು ಸ್ತರದ  ಬಿಲ್ ನೀಡಲಾಗುತ್ತಿದೆ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ವಿದ್ಯುತ್ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಜೂನ್ ತಿಂಗಳಿನಿಂದ ಗ್ರಾಹಕರಿಗೆ ಎರಡು ಸ್ತರದ ವಿದ್ಯುತ್ ಯೂನಿಟ್ ದರ ನಿಗದಿಪಡಿಸಲಾಗಿದೆ. 100 ಯೂನಿಟ್ ವರೆಗೆ ಪ್ರತಿ ಯೂನಿಟ್ ಗೆ 4.15 ರೂ. ಹಾಗೂ 100 ಯೂನಿಟ್ ಮೀರಿದಾಗ ಎಲ್ಲಾ ಯೂನಿಟ್ ಗೆ ತಲಾ 7 ರೂ. ದರ ವಿಧಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

100 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡಿದ ಗ್ರಾಹಕರಿಗೆ ಪ್ರತಿ ಯೂನಿಟ್ ಗೆ 7 ರೂಪಾಯಿ ನೀಡಬೇಕಿದೆ. ಮೇ ತಿಂಗಳಿಗೆ ಹೋಲಿಸಿದಾಗ ಜೂನ್ ತಿಂಗಳ ವಿದ್ಯುತ್ ಬಿಲ್ ಭಾರಿ ಏರಿಕೆ ಕಂಡಿದೆ. 100ಕ್ಕಿಂತ ಹೆಚ್ಚು ಯೂನಿಟ್ ವಿದ್ಯುತ್ ಬಳಸುವವರಿಗೆ ವಿದ್ಯುತ್ ದರ ದುಬಾರಿಯಾಗಲಿದೆ. ಇದರೊಂದಿಗೆ ನಿಗದಿತ ವೆಚ್ಚ, ತೆರಿಗೆ, ದಂಡ, ಇಂಧನ ವೆಚ್ಚವನ್ನು ಪ್ರತ್ಯೇಕವಾಗಿ ಪಾವತಿಸಬೇಕಿರುವುದರಿಂದ ಗ್ರಾಹಕರಿಗೆ ಬಿಸಿ ತಟ್ಟಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular