ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಭಾರಿ ಪ್ರಮಾಣದಲ್ಲಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಇದರ ಲಾಭವನ್ನು ಜನಸಾಮಾನ್ಯರಿಗೆ ವರ್ಗಾಯಿಸಲು ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಲು ತೈಲ ಕಂಪನಿಗಳು ಚಿಂತನೆ ನಡೆಸಿವೆ ಎಂದು ಹೇಳಲಾಗಿತ್ತು. ಆದರೆ ಕೇಂದ್ರ ಸರ್ಕಾರ ತೈಲ ದರ ಇಳಿಸಲು ಕೈ ಚೆಲ್ಲಿದೆ.
ಕೇಂದ್ರ ಪೆಟ್ರೋಲಿಯಂ ಸಚಿವ ಹರದೀಪ್ ಸಿಂಗ್ ಪುರಿ, ಸದ್ಯಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಇಲ್ಲ. ಮುಂದೆ ನೋಡೋಣ ಎಂದು ಹೇಳಿದ್ದಾರೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ದರ ಸ್ಥಿರವಾಗಿ ಉಳಿದಾಗ, ಮುಂದಿನ ತ್ರೈಮಾಸಿಕದಲ್ಲಿ ತೈಲ ಕಂಪನಿಗಳು ಉತ್ತಮ ಲಾಭ ದಾಖಲಿಸಿದರೆ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಸುವ ಬಗ್ಗೆ ಗಮನಹರಿಸಬಹುದು. ತೈಲದರ ಹೇಳಿಕೆ ಬಗ್ಗೆ ಘೋಷಿಸುವ ಸ್ಥಿತಿಯಲ್ಲಿ ನಾನಿಲ್ಲ. ಈ ಬಗ್ಗೆ ತೈಲ ಕಂಪನಿಗಳು ತೀರ್ಮಾನ ಕೈಗೊಳ್ಳಬೇಕಿದ್ದು, ಮುಂದೆ ಏನಾಗುತ್ತದೆ ಎಂಬುದನ್ನು ನೋಡೋಣ ಎಂದು ಹೇಳಿದ್ದಾರೆ.