HomeKarnatakaBIG NEWS: ಬಿಜೆಪಿಯಂತೆ ನುಡಿದು ನಾವು ಮಾತು ತಪ್ಪಿಲ್ಲ; ಇಂದಿನಿಂದ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್...

BIG NEWS: ಬಿಜೆಪಿಯಂತೆ ನುಡಿದು ನಾವು ಮಾತು ತಪ್ಪಿಲ್ಲ; ಇಂದಿನಿಂದ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಸೇವೆ ಆರಂಭವಾಗುತ್ತಿದೆ. ನಾವು ನುಡಿದಂತೆ ನಡೆದಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಾವು ಬಿಜೆಪಿ ರೀತಿ ನುಡಿದು ಮಾತು ತಪ್ಪಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಇಂದು ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ದೊರೆಯಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯಾದ್ಯಂತ ಏಕಕಾಲದಲ್ಲಿ ಈ ಯೋಜನೆ ಜಾರಿಗೆ ಬರಲಿದೆ. ಸೇವಾ ಸಿಂಧು ಆಪ್ ಕೂಡ ಇಂದಿನಿಂದ ಆರಂಭವಾಗಲಿದ್ದು, ಉಚಿತ ಪ್ರಯಾಣ ಮಾಡುವ ಮಹಿಳೆಯರು ಮೂರು ತಿಂಗಳ ಒಳಗಾಗಿ ಸ್ಮಾರ್ಟ್ ಕಾರ್ಡ್ ಪಡೆಯಬೇಕು. ಅಲ್ಲಿಯವರೆಗೆ ಆಧಾರ್ ಕಾರ್ಡ್, ಡ್ರೈವಿಂಗ್ ಲೈನ್ಸಸ್ ಯಾವುದೇ ಒಂದು ಗುರುತಿನ ಚೀಟಿ ತೋರಿಸಿ ಉಚಿತ ಪ್ರಯಾಣ ಮಾಡಬಹುದು ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular