HomeKarnatakaBIG NEWS: ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತವೆ; ವಿಪಕ್ಷಗಳಿಗೆ ತಿರುಗೇಟು ನೀಡಿದ ಡಿಸಿಎಂ

BIG NEWS: ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತವೆ; ವಿಪಕ್ಷಗಳಿಗೆ ತಿರುಗೇಟು ನೀಡಿದ ಡಿಸಿಎಂ

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಶಕ್ತಿ ಯೋಜನೆ ಮೂಲಕ ಮಹಿಳೆಯರ ಸಬಲೀಕರಣಕ್ಕಾಗಿ ದಿಟ್ಟ ಹೆಜ್ಜೆಯನ್ನು ಕಾಂಗ್ರೆಸ್ ಸರ್ಕಾರ ಇಟ್ಟಿದೆ. ಈ ಮೂಲಕ ನಾವು ನುಡಿದಂತೆ ನಡೆದಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಶಕ್ತಿ ಯೋಜನೆಗೆ ಚಾಲನೆ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ, ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ ನಾವು 5 ಗ್ಯಾರಂಟಿ ಭರವಸೆಗಳನ್ನು ನೀಡಿದ್ದೆವು. ಅದರ ಮೊದಲ ಯೋಜನೆ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದೇವೆ. ರಾಹುಲ್ ಗಾಂಧಿಯವರು ಮಂಗಳೂರಿನಲ್ಲಿ ಶಕ್ತಿ ಯೋಜನೆಯನ್ನು ಘೋಷಿಸಿದ್ದರು. ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಎಂದು ಭರವಸೆ ಕೊಟ್ಟಿದ್ದರು. ಅದರಂತೆ ಇಂದು ನಾವು ಕೊಟ್ಟ ಭರವಸೆಯನ್ನು ಈಡೇರಿಸಿದ್ದೇವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ, ಜೆಡಿಎಸ್ ನವರು ನಮ್ಮ ಗ್ಯಾರಂಟಿಗಳನ್ನು ಟೀಕಿಸುತ್ತಿದ್ದಾರೆ. ಟೀಕೆಗಳು ಸಾಯುತ್ತವೆ. ಕೆಲಸಗಳು ಮಾತ್ರ ಉಳಿಯುತ್ತವೆ. ನಾನು ನುಡಿದಂತೆ ನಡೆಯುತ್ತಿದ್ದೇವೆ. ಅದೇ ಕಾಂಗ್ರೆಸ್ ನ ಶಕ್ತಿ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular