HomeLatest News209 ರನ್ ಗಳಿಂದ ಭಾರತ ಮಣಿಸಿದ ಆಸ್ಟ್ರೇಲಿಯಾ WTC ಚಾಂಪಿಯನ್: ಎಲ್ಲಾ ಪ್ರಮುಖ ಐಸಿಸಿ ಪಂದ್ಯಾವಳಿ...

209 ರನ್ ಗಳಿಂದ ಭಾರತ ಮಣಿಸಿದ ಆಸ್ಟ್ರೇಲಿಯಾ WTC ಚಾಂಪಿಯನ್: ಎಲ್ಲಾ ಪ್ರಮುಖ ಐಸಿಸಿ ಪಂದ್ಯಾವಳಿ ಗೆದ್ದ ಮೊದಲ ತಂಡ ಆಸೀಸ್

ಲಂಡನ್ ನ ಕೆನ್ನಿಂಗ್ ಟನ್ ಒವೆಲ್ ಮೈದಾನದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು ಆಸ್ಟ್ರೇಲಿಯಾ 209 ರನ್ ಗಳಿಂದ ಸೋಲಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಪ್ರಶಸ್ತಿ ಗೆದ್ದುಕೊಂಡಿದೆ.

ಆಸ್ಟ್ರೇಲಿಯಾ: ಮೊದಲ ಇನಿಂಗ್ಸ್ 469, 2ನೇ ಇನಿಂಗ್ಸ್ 270/8ಡಿಕ್ಲೇರ್

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತ: ಮೊದಲ ಇನಿಂಗ್ಸ್ 296, ಎರಡನೇ ಇನಿಂಗ್ಸ್ 234

ಆಸ್ಟ್ರೇಲಿಯಾ WTC ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಜಯಗಳಿಸಿ WTC ಚಾಂಪಿಯನ್ ಶಿಪ್ ಪ್ರಶಸ್ತಿ ಪಡೆಯುವುದರೊಂದಿಗೆ ಎಲ್ಲಾ ಪ್ರಮುಖ ಐಸಿಸಿ ಪಂದ್ಯಾವಳಿಗಳನ್ನು ಗೆದ್ದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಭಾರತ ಎರಡನೇ ಬಾರಿಯೂ WTC ಫೈನಲ್ ನಲ್ಲಿ ಸೋಲು ಕಂಡಿದೆ. 2021 ರಲ್ಲಿ ನ್ಯೂಜಿಲೆಂಡ್ ವಿರುದ್ಧ WTC ಫೈನಲ್ ನಲ್ಲಿ ಟೀಂ ಇಂಡಿಯಾ ಸೋಲು ಕಂಡಿತ್ತು. ಈಗ ಮತ್ತೊಮ್ಮೆ WTC ಫೈನಲ್ ನಲ್ಲಿ ಫೈನಲ್ ಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular