HomeKarnatakaಎಲ್ಲಾ ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಶ್ರವಣ ತಪಾಸಣೆ ಕಡ್ಡಾಯ: ಆರೋಗ್ಯ ಇಲಾಖೆಯಿಂದ ಸುತ್ತೋಲೆ

ಎಲ್ಲಾ ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಶ್ರವಣ ತಪಾಸಣೆ ಕಡ್ಡಾಯ: ಆರೋಗ್ಯ ಇಲಾಖೆಯಿಂದ ಸುತ್ತೋಲೆ

ಬೆಂಗಳೂರು: ನವಜಾತ ಶಿಶುಗಳ ಕಡ್ಡಾಯ ಶ್ರವಣ ತಪಾಸಣೆಗೆ ಆರೋಗ್ಯ ಇಲಾಖೆ ವತಿಯಿಂದ ಸುತ್ತೋಲೆ ಹೊರಡಿಸಲಾಗಿದೆ.

ಆರಂಭಿಕ ಹಂತದಲ್ಲೇ ಶ್ರವಣ ಸಮಸ್ಯೆ ಪತ್ತೆ ಹಚ್ಚಿ ಚಿಕಿತ್ಸೆ ನೀಡುವುದರಿಂದ ಶ್ರವಣದೋಷದ ಸಮಸ್ಯೆ ತಡೆಯಬಹುದಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ವತಿಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ತಾಯಿ -ಮಕ್ಕಳ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನವಜಾತ ಶಿಶುಗಳಿಗೆ ಕಡ್ಡಾಯವಾಗಿ ಶ್ರವಣ ತಪಾಸನೆ ನಡೆಸಲು ಸೂಚಿಸಲಾಗಿದೆ. ಶ್ರವಣ ಸಮಸ್ಯೆ ಇದ್ದ ನವಜಾತ ಶಿಶುಗಳಿಗೆ ಸೂಕ್ತ ವೈದ್ಯಕೀಯ ನೆರವು ಕಲ್ಪಿಸುವಂತೆ ಆರೋಗ್ಯ ಇಲಾಖೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular