ಬೆಂಗಳೂರು : ನವಜಾತ ಶಿಶುಗಳಿಗೆ ಕಡ್ಡಾಯವಾಗಿ ಶ್ರವಣ ತಪಾಸಣೆ ಮಾಡಿಸಲು ರಾಜ್ಯ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಜಿಲ್ಲಾ ಆಸ್ಪತ್ರೆ, ಸಲ್ಲೂಕು ಸಾರ್ವಜನಿಕ ಆಸ್ಪತ್ಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನಿಸಿದ ನವಜಾತ ಶಿಶುಗಳಿಗೆ ಕಾಯವಾಗಿ ಉಲ್ಲೇಖಿತ ಮಾರ್ಗಸೂಚಿಯಲ್ಲಿ ಉಲ್ಲೇಖಿಸಿರುವ ಕಾರ್ಯ ವಿಧಾನಗಳಂತೆ ಶ್ರವಣ ತಪಾಸಣೆ ನಡೆಸಿ, ಶ್ರವಣ ದೋಷವುಳ್ಳ ಫಲಾನುಭವಿಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ, ಅಂತಹ ಮಕ್ಕಳಿಗೆ ಸೂಕ್ತ ವೈದ್ಯಕೀಯ ನೆರವು ಹಾಗೂ ಶಸ್ತ್ರ ಚಿಕಿತ್ಸೆಗೊಳಪಡಿಸುವ ಮೂಲಕ ಶ್ರವಣ ದೋಷವನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳತಕ್ಕದ್ದು ಎಂದು ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.