ಬೆಂಗಳೂರು : ಮಹಿಳೆಯರಿಗೆ ನೀಡಲಾಗುತ್ತಿರುವ ಉಚಿತ ಬಸ್ ಪ್ರಯಾಣ ಯೋಜನೆಯು ಮುಂದಿನ 10 ವರ್ಷ ಜಾರಿಯಲ್ಲಿರುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಯಾವುದೇ ಅನುಮಾನ ಬೇಡ ಮುಂದಿನ 10 ವರ್ಷ ನಾವೇ ಅಧಿಕಾರದಲ್ಲಿರುತ್ತೇವೆ, ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. 10 ವರ್ಷ ಮಹಿಳೆಯರಿಗೆ ಉಚಿತ ಪ್ರಯಾಣದ ಯೋಜನೆ ನೀಡುತ್ತೇವೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ನುಡಿದಂತೆ ನಡೆಯುವ ಸರ್ಕಾರ ನಮ್ಮದು, ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ರಾಜ್ಯದ ಎಲ್ಲಾ ಮಹಿಳೆಯರು ಕೂಡ ಉಚಿತ ಬಸ್ ಪಾಸ್ ಪ್ರಯಾಣದ ಯೋಜನೆ ಪಡೆಯಹುದು. ಎಲ್ಲ ಮಹಿಳೆಯರಿಗೂ ಇದು ಅನ್ವಯವಾಗಲಿದೆ. ಅಂತರರಾಜ್ಯ, ಎಸಿ, ವೋಲ್ವೋ ಬಸ್ಗಳನ್ನು ಹೊರತುಪಡಿಸಿ ಶೇ.90ಕ್ಕಿಂತ ಹೆಚ್ಚು ಬಸ್ ಗಳಲ್ಲಿ ಮಹಿಳೆಯರು ರಾಜ್ಯದ ಯಾವುದೇ ಮೂಲೆಗೆ ಬೇಕಾದರು ಸಂಚರಿಸಬಹುದು ಎಂದರು.