HomeIndiaBIG NEWS: ಬಿಪರ್ ಜಾಯ್ ಚಂಡಮಾರುತದ ಆರ್ಭಟ; ಕಚ್ ಕರಾವಳಿಯಲ್ಲಿ ಮನೆಗಳಿಗೆ ಅಪ್ಪಳಿಸುತ್ತಿರುವ ಬೃಹತ್ ಅಲೆಗಳು;...

BIG NEWS: ಬಿಪರ್ ಜಾಯ್ ಚಂಡಮಾರುತದ ಆರ್ಭಟ; ಕಚ್ ಕರಾವಳಿಯಲ್ಲಿ ಮನೆಗಳಿಗೆ ಅಪ್ಪಳಿಸುತ್ತಿರುವ ಬೃಹತ್ ಅಲೆಗಳು; ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಅಹಮದಾಬಾದ್: ಬಿಪರ್ ಜಾಯ್ ಚಂಡಮಾರುತದ ಆರ್ಭಟಕ್ಕೆ ಗುಜರಾತ್ ನ ಕರಾವಳಿ ಜಿಲ್ಲೆಗಳು ನಲುಗಿದ್ದು, ಸಮುದ್ರದಲ್ಲಿ 15 ಅಡಿ ಎತ್ತರದ ಬೃಹತ್ ಅಲೆಗಳು ಏಳುತ್ತಿವೆ. ಚಂಡಮಾರುತದ ಅಬ್ಬರಕ್ಕೆ ಸಮುದ್ರದ ಅಲೆಗಳು ತೀರ ಪ್ರದೇಶದ ಮನೆ, ಶಾಲೆಗಳಿಗೆ ಅಪ್ಪಳಿಸುತ್ತಿದ್ದು, ಕಡಲ್ಕೊರೆತ ಸಂಭವಿಸುತ್ತಿದೆ.

ಗುಜರಾತ್ ನ ಮುಲ್ ದ್ವಾರಕ್ ಬಳಿ ಸಮುದ್ರದ ಗಜಗಾತ್ರದ ಅಲೆಗಳು ಮನೆಗಳಿಗೆ ಅಪ್ಪಳಿಸುತ್ತಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಕಚ್ ಕರಾವಳಿ ಪ್ರದೇಶದಲ್ಲಿಯೂ ಅಲೆಗಳ ಅಬ್ಬರ ಜೋರಾಗಿದ್ದು, ಒಂದೆಡೆ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಮೇಲ್ಛಾವಣಿಗಳು ಹಾರಿ ಹೋಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತ ಜೂನ್ 15ರ ವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಮೀನುಗಾರರು ಹಾಗೂ ಪ್ರವಾಸಿಗರಿಗೆ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular