HomeIndiaGOOD NEWS: ಕೊರೊನಾ ಸೋಂಕು ಮತ್ತಷ್ಟು ಕುಸಿತ; 4 ತಿಂಗಳ ಬಳಿಕ ಅತಿ ಕಡಿಮೆ ಪ್ರಕರಣ...

GOOD NEWS: ಕೊರೊನಾ ಸೋಂಕು ಮತ್ತಷ್ಟು ಕುಸಿತ; 4 ತಿಂಗಳ ಬಳಿಕ ಅತಿ ಕಡಿಮೆ ಪ್ರಕರಣ ದಾಖಲು


ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ ಕೇವಲ 92 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದು ಕಳೆದ ನಾಲ್ಕು ತಿಂಗಳಲ್ಲಿಯೇ ಅತಿ ಕಡಿಮೆ ಸಂಖ್ಯೆಯಲ್ಲಿ ಪತ್ತೆಯಾದ ಕೋವಿಡ್ ಕೇಸ್ ಗಳಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಈವರೆಗೆ 531891 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಕೋವಿಡ್ ಸಕ್ರಿಯ ಪ್ರಕರಣಗಳು ಇನ್ನಷ್ಟು ಕಡಿಮೆಯಾಗಿದ್ದು, ದೇಶದಲ್ಲಿ 2350 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 44458639 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 157 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,30,771 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 31,616 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular