HomeKarnatakaBIG NEWS: ನೀವು ಜನರನ್ನು ಸಾಯಿಸಲು ಇರೋದಾ? ಸಿಇಒಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

BIG NEWS: ನೀವು ಜನರನ್ನು ಸಾಯಿಸಲು ಇರೋದಾ? ಸಿಇಒಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ 8 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ 8 ಜಿಲ್ಲೆಗಳ ಸಿಇಒಗಳು ಹಾಗೂ ಡಿಸಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆಯಾಗಬಾರದು. ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಇದೇ ವೇಳೆ ಕೊಪ್ಪಳದಲ್ಲಿ ಕಲುಷಿತ ನೀರಿಗೆ ಗ್ರಾಮಸ್ಥರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲಾ ಪಂಚಾಯತ್ ಸಿಇಒ ಅವರನ್ನು ತರಾಟೆಗೆ ತೆಗೆದುಕೊಂಡ ಸಿಎಂ, ನೀವು ಜನರನ್ನು ಸಾಯಿಸುವುದಕ್ಕೆ ಇರುವುದಾ? ಕಳಪೆ ಕಾಮಗಾರಿಯೇ ಕಲುಷಿತ ನೀರಿಗೆ ಕಾರಣ. ಪ್ರಕರಣದ ಬಗ್ಗೆ ವಿಶೇಷ ತಂಡ ರಚಿಸಿ ತನಿಖೆ ನಡೆಸಿ ಎಂದು ಆದೇಶ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂತಹ ಪ್ರಕರಣಗಳು ಮರುಕಳಿಸಿದರೆ ಜಿಲ್ಲಾ ಪಂಚಾಯತ್ ಸಿಇಒಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular